(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024- 25ನೇ ಸಾಲಿಗೆ 1ನೇ ತರಗತಿಯಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP)ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷದ ಒಳಗಿರಬೇಕು. ಅರ್ಜಿಯನ್ನು SSP ಪೋರ್ಟಲ್ https://ssp.postmatric.karnataka.gov.in ನಲ್ಲಿ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ ವಿಳಾಸ: mïhttps://dom.karnataka.gov.in/dakshina_kannada/public ಅಥವಾ SSP ಪೋರ್ಟಲ್ https://ssp.karnataka.gov.in. ಸಹಾಯವಾಣಿ ಸಂಖ್ಯೆ 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.