ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ – ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2024- 25ನೇ ಸಾಲಿನ ವಿವಿಧ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯ ಪಡೆಯಲು ಆನ್‍ ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು:
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ: ಸಕಇ 225 ಬಿಸಿಎ 2000, ದಿನಾಂಕ:30/03/2002ರನ್ವಯ ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ 21 ವರ್ಷಗಳಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98,000/- ಮತ್ತು ನಗರ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯೊಳಗಿರಬೇಕು.

ಯೋಜನೆಗಳ ವಿವರ:-

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‍ ಗಳ ಸಹಯೋಗದೊಂದಿಗೆ). ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ). ಅರಿವು ಶೈಕ್ಷಣಿಕಸಾಲ ಯೋಜನೆ (ನವೀಕರಣ). ವಿದೇಶಿ ವ್ಯಾಸಂಗ ಯೋಜನೆ (ಈ ಯೋಜನೆಯಡಿ ವಾರ್ಷಿಕ ವರಮಾನವು ರೂ. 8 ಲಕ್ಷಗಳ ಮಿತಿಯಲ್ಲಿ ಇರಬೇಕು). ಗಂಗಾ ಕಲ್ಯಾಣ ನೀರಾವರಿ ಯೋಜನೆ- ಈ ಯೋಜನೆಯಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಸ್ವಾವಲಂಬಿ ಸಾರಥಿ ಯೋಜನೆ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ ನಲ್ಲಿರುವಂತೆ ಅರ್ಜಿದಾರರ ಹೆಸರು/ ವಿಳಾಸ/ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಗಳು), ಬೆಂಗಳೂರು-ಒನ್/ ಕರ್ನಾಟಕ-ಒನ್/ ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‍ಲೈ ನ್ ಮೂಲಕ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 16 ಕೊನೆಯ ದಿನ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. 2023-24ನೇ ಸಾಲಿನ ಯೋಜನೆಗೆ ಅರ್ಜಿಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ ವಿಳಾಸ: http://upparadevelopment.karnataka.gov.in ಮೂಲಕ ಅಥವಾ ನಿಗಮದ ಕೇಂದ್ರ ಕಛೇರಿ ದೂರವಾಣಿ ಸಂಖ್ಯೆ: 080-22252555 ಹಾಗೂ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ:0824-2456544, ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯನ್ನು ಸಂಪರ್ಕಿಸುವಂತೆ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group