(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ಯುವಕರು ಹಾಗೂ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿರುವ ಆನ್‌ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್‌ಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಆ್ಯಪ್ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕೋವಿಡ್ ಸಮಯದಲ್ಲಿ ಅನೇಕ ಆನ್‌ಲೈನ್ ಗೇಮ್‌ಗಳು, ಆ್ಯಪ್‌ಗಳನ್ನು ನಿಷೇಧಿಸುವುದು ಸೇರಿದಂತೆ ಅನೇಕ ಕ್ರಾಂತಿಕಾರಿ ಹೆಜ್ಜೆಯನ್ನ ನೀವು ಇಟ್ಟಿದ್ದೀರಿ. ಅನೇಕ ಕುಟುಂಬಗಳು ಮತ್ತು ಯುವಕರು ಈ ಆನ್‌ಲೈನ್ ಆಟಗಳಿಗೆ ವ್ಯಸನಿಯಾಗುವುದನ್ನು ನಾನು ನೋಡಿದ್ದೇನೆ ಮತ್ತು ಈ ಆನ್‌ಲೈನ್ ಆಟಗಳಿಗೆ ವ್ಯಸನದ ನಂತರದ ಪರಿಣಾಮಗಳಿಂದ ಕುಟುಂಬಗಳು ಬೀದಿಗೆ ಬಂದಿವೆ ಎಂದು ವರದಿಯಾಗಿದೆ.