ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ ಪೇಟೆಯಲ್ಲಿ ನಡೆದಿದೆ.

ಆರೋಪಿಯನ್ನು ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಎಂದು ಗುರುತಿಸಲಾಗಿದೆ. ಈತ ಕುದೂರಿನ ನಿವಾಸಿಯಾಗಿದ್ದು, ಈತನ ವಿರುದ್ಧ ಬೆಂಗಳೂರು ನಗರ, ಬೆಂಗಳೂರು ಜಿಲ್ಲೆ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಟ್ಟು 51 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸಪರ ತಂಡ ಮಹಿಮಾಪುರ ಕ್ರಾಸ್‌ನಲ್ಲಿರುವ ದಾಬಸ್‌ಪೇಟೆ-ರಾಮನಗರ ಹೆದ್ದಾರಿಗೆ ಬಂದಿತ್ತು. ಈ ವೇಳೆ ಜಯಂತ್ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಆತನ ಬಲಗಾಲಿಗೆ ಗುಂಡಿ ಹಾರಿಸಿ, ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Also Read  ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಚಾರ್ಜ್‌ಶೀಟ್ ಸಲ್ಲಿಸಿ ಈ.ಡಿ  24 ಮಂದಿ ಹೆಸರು ಉಲ್ಲೇಖ     

                                                             

 

 

error: Content is protected !!
Scroll to Top