ನಡುರಸ್ತೆಯಲ್ಲಿ ಉರುಳಿ ಬಿದ್ದ ಮರ 3 ಕಾರುಗಳು ಜಖಂ– ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಒಣಗಿದ್ದ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ಬಿದ್ದ ಪರಿಣಾಮ 3 ಕಾರುಗಳು ಜಖಂಗೊಂಡು, ಇಬ್ಬರಿಗೆ ಗಾಯವಾಗಿರುವ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದೆ.

ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಮೂರು ಕಾರುಗಳು ಅಡಿಗೆ ಸಿಲುಕಿವೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಿಬಿಎಂಪಿ ಅರಣ್ಯ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿದ್ದು, ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Also Read  ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..!

 

error: Content is protected !!
Scroll to Top