ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್‍.ಎಸ್‍.ಎಲ್‍ಸಿ ಪ್ರೋತ್ಸಾಹ ಧನದ ಮೊತ್ತ ರೂ. 20,000/-. ಡಿಗ್ರಿ (ಬಿಎ, ಬಿಕಾಂ, ಬಿ ಎಸ್ಸಿ, ಬಿ.ಎಡ್. ಬಿ. ಬಿಪಿಎಡ್) – ರೂ. 25000/-. ಸ್ನಾತಕೋತ್ತರ ಕೋರ್ಸು ಗಳು (ಎಂ.ಎ, ಎಂಎಸ್ಸಿ, ಎಂಕಾಂ, ಎಂಬಿಎ, ಎಂಸಿಎ, ಎಂ.ಎಡ್, ಎಂ.ಪಿಎಡ್, ಮಿಫಾ ಇತ್ಯಾದಿ) ರೂ.30,000/- . ಕೃಷಿ, ಇಂಜಿನಿಯರಿಂಗ್, ಪಶುವೈದ್ಯಕೀಯ, ಫಾರ್ಮಸಿ – ರೂ.35,000/-

Also Read  ಚೀನಾದ ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ..!!!

ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ಮೂಲಕ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗಾಗಿ ಅರ್ಜಿಯ ಪ್ರತಿಯನ್ನು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರು (ಗ್ರೇಡ್ 1&2) ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಬಂಟ್ವಾಳ ಪುತ್ತೂರು ಬೆಳ್ತಂಗಡಿ ಮತ್ತು ಸುಳ್ಯ ತಾಲೂಕುಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಹಾಗೂ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವಂತೆ ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top