ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು 

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02.  ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ನೀಡಿದ ದೂರಿನ ಅನುಸಾರ, “ನಾನು ಅರುಣ್ ಕುಮಾರ್ ಪುತ್ತಿಲ ಅವರ ಹಿಂದುತ್ವ ಸಿದ್ಧಾಂತದಿಂದ ಪ್ರಭಾವಿತನಾಗಿದ್ದೆ ಮತ್ತು ಅವರ ಅಭಿಮಾನಿಯಾಗಿದ್ದೇನೆ. ನಾನು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಬೆಂಬಲ ನೀಡುತ್ತಿದ್ದೆ. 2023ರ ಜೂನ್ ನಲ್ಲಿ ಬೆಂಗಳೂರಿನ ಹೋಟೆಲ್‌ ಗೆ ಬರುವಂತೆ ಹೇಳಿ ಲೈಂಗಿಕ ದೌರ್ಜನ್ಯ ನಡೆದಿದೆ. ದೌರ್ಜನ್ಯದ ಫೋಟೋ, ಸೆಲ್ಫಿ ವೀಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡಿದ್ದಾರೆಂದು ಸಹ ಆರೋಪ ಮಾಡಿದ್ದಾರೆ. ಮಹಿಳೆ ನೀಡಿದ ದೂರಿನ ಅನುಸಾರ ಐಪಿಸಿ ಸೆಕ್ಷನ್ 417, 354ಎ, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Also Read  ಇಂದು ಸರಕಾರಿ ಕಚೇರಿ ಬಂದ್     ➤ ಮುಷ್ಕರ ನಿರ್ಧಾರ  ಹಿಂದಕ್ಕೆ ಪಡೆಯದ  ರಾಜ್ಯ ಸರ್ಕಾರಿ ನೌಕರರ ಸಂಘ

 

error: Content is protected !!
Scroll to Top