2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ       

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಮುಂದಿನ 2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮರು ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಿದ್ದು, ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಕೋರಿ ಆಗ್ರಹಿಸಿ ಪ್ರತಿಭಟಿಸಿದ್ದರು. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

Also Read  ಡ್ರಮ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ ➤ ಮೂವರ ಬಂಧನ         

 

error: Content is protected !!
Scroll to Top