ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ  ರಾಜ್ಯದ ಮಹಿಳೆಯರಿಗೆ ಹೊಸ ಆಫರ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರಿಗೆ ಮನವಿ ಮಾಡಿದ್ದಾರೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ ಗಳು ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ ​ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌ ಎಂದು ಅವರು ಉಲ್ಲೇಖಿಸಿದ್ದಾರೆ ಎಂದು ವರದಿ ಪ್ರಕಟಣೆಯಾಗಿದೆ.

Also Read  ಹವಾಮಾನ ವರದಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

 

 

error: Content is protected !!
Scroll to Top