ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ- ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ‌ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ‌ಹಲ್ಲೆ ನಡೆಸಿದ ಘಟನೆ ಸೋಮವಾರದಂದು ಬೆಳಗ್ಗೆ ನಾಗುರಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಹಲ್ಲೆಗೊಳಗಾದವ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ. ಮೂವರು ವಿದ್ಯಾರ್ಥಿಗಳು ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಅದೇ ಬಸ್ಸಿನಲ್ಲಿ ‌ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಪಂಪ್‌ ವೆಲ್‌ ನಲ್ಲಿ ಬಸ್ಸಿನಿಂದ ಇಳಿದು ಹೋಗಿರುವುದಾಗಿ ಆರೋಪಿಸಲಾಗಿದೆ.

error: Content is protected !!

Join the Group

Join WhatsApp Group