ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 03. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್​ ಬಳಿ ಸಂಭವಿಸಿದೆ.

ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್ ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿ ಹೊಡೆದು ಫ್ಲೈಓವರ್​​​​​ ಮೇಲೆ ಡಿವೈಡರ್​​​ನಿಂದ ಹಾರಿ ಬಿದ್ದಿದೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

Also Read  ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ

 

error: Content is protected !!
Scroll to Top