(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 03. ರಾಜ್ಯದಲ್ಲಿ ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚಿನ ಶುಲ್ಕ ವಸೂಲಿ ಹಾಗೂ ಅಸಮರ್ಪಕ ಸೌಲಭ್ಯಗಳ ಕುರಿತು ಕಳವಳ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಈ ಸಂಸ್ಥೆಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸಲು ಮುಂದಾಗಿದೆ.
ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು, ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ, ಇದೇ ವೇಳೆ ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್ ಸರ್ಟಿಫಿಕೇಟ್ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್ ಅನ್ನು ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು ಎಂದು ವರದಿಯಾಗಿದೆ.