ಮುಡಾ ಹಗರಣ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು- ಆದೇಶ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 03. ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್ಕುಮಾರ್ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮುಡಾ ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು, ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳ ಪಾಲನೆಯಾಗುತ್ತಿಲ್ಲದಿರುವುದನ್ನು ಗಮನಿಸಲಾಗಿದೆ. ನಿಯಮಗಳಿಗೆ ಮತ್ತು ಸರ್ಕಾರದ ನಿರ್ದೇಶನಗಳಿಗೆ ವ್ಯತಿರಿಕ್ತವಾಗಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ತೆಗೆದಿರುವುದು ಮತ್ತು ಅದರಂತೆ ಕ್ರಮವಹಿಸುತ್ತಿರುವುದು ಕಂಡುಬಂದಿದೆ. ಅಲ್ಲದೇ ದಿನೇಶ್ಕುಮಾರ್ಅವರ ವಿರುದ್ಧ ಇನ್ನೂ ಅನೇಕ ಆರೋಪಗಳಿಂದ ಕರ್ತವ್ಯ ಲೋಪ ಎಸಗಿರುವುದು ಸಕ್ಷಮ ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ. ಸದರಿ ಅವರು ಅಧಿಕಾರದಲ್ಲಿ ಮುಂದುವರಿದಲ್ಲಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

error: Content is protected !!
Scroll to Top