ಮನೆ ಕಳ್ಳತನ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 03.  ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳ ನಿವಾಸಿ ಸಂತೋಷ್ ಟಿ(32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಮನೆಯ ಮಲಗುವ ಕೋಣೆಯಲ್ಲಿದ್ದ ಗೋದ್ರೇಜ್ ಲಾಕರ್‌ನಿಂದ 10.05 ಲಕ್ಷ ಮೌಲ್ಯದ 33 ಪವನ್ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿತ್ತು. ಸೆಪ್ಟೆಂಬರ್ 1 ರಂದು ಆರೋಪಿ ಸಂತೋಷ್ ಎಂಬಾತನನ್ನು ಬಂಧಿಸಿದ ತಂಡವು ದ್ವಿಚಕ್ರವಾಹನವನ್ನು ಜಪ್ತಿ ಮಾಡುವುದರೊಂದಿಗೆ ಕಳವು ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು

 

error: Content is protected !!
Scroll to Top