(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ನಡೆದು ಮೂರು ತಿಂಗಳುಗಳೇ ಕಳೆಯುತ್ತಾ ಬಂದಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ರೆಡಿಯಾಗಿದ್ದಾರೆ ಎಂದು ವರದಿಯಾಗಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಹಾಗೂ ಗ್ಯಾಂಗ್ ಅರೆಸ್ಟ್ ಆಗಿದೆ. ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲು ರೆಡಿ ಆಗಿದ್ದು, ಬುಧವಾರದಂದು (ಸೆಪ್ಟೆಂಬರ್ 4) ದೋಷಾರೋಪ ಪಟ್ಟಿಯು ಕೋರ್ಟ್ ಕೈ ಸೇರುವ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ. ಚಾರ್ಜ್ಶೀಟ್ನಲ್ಲಿ ನಾಲ್ಕು ಸಾವಿರ ಪುಟ ಇವೆ ಎನ್ನಲಾಗಿದೆ. ನೂರಾರು ಸಾಕ್ಷಿಗಳು, ಅನೇಕ ವರದಿಗಳು ಇದರಲ್ಲಿ ಇರಲಿವೆ. ಈ ಚಾರ್ಜ್ ಶೀಟ್ನಲ್ಲಿ ದರ್ಶನ್ ಅವರನ್ನು ಎ2 ಇಂದ ಎ1 ಆರೋಪಿ ಆಗಿ ಬದಲಾಯಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.