ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ನಂತರ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಯಶವಂತಪುರದಲ್ಲಿ ಮಂಗಳವಾರದಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ತಮಿಳುನಾಡು ಸೇಲಂ ಮೂಲದ ಶಬರೀಶ್(29) ಎಂದು ಗುರುತಿಸಲಾಗಿದೆ. ಗಾಯಗೊಂಡ ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಬೈಕ್ ಸವಾರ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಮುಂದುವರಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಕಾರು ಸ್ಯಾಂಕಿ ರಸ್ತೆಯಿಂದ ಯಶವಂತಪುರ ಮಾರ್ಗವಾಗಿ ತುಮಕೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಮದ್ಯ ಸೇವಿಸಿ ಚಾಲನೆ ಮಾಡಿದ್ದರಿಂದ ಅಪಘಾತವಾಗಿದೆ ಎಂದು ಹೇಳಲಾಗಿದೆ. ಈ ಕುರಿತು ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top