ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ- ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  2027ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1ನೇ ಹಂತದ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸಲು ಸಾಧ್ಯವಾಗಲಿದ್ದು, 2ನೇ ಹಂತದ ಯೋಜನೆಯಡಿ ಉಳಿದ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ ತುಮಕೂರಿಗೆ ನೀರು ಹರಿಸಲಾಗುವುದು. ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ ಎಂದು ವರದಿ ತಿಳಿಸಿದೆ.                                

Also Read  ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು       

 

error: Content is protected !!
Scroll to Top