ಈದ್-ಮಿಲಾದ್ ಹಾಗೂ ಗಣೇಶ ಚತುರ್ಥಿ ಹಬ್ಬ; ಡಿಜೆ ನಿಷೇಧಿಸಿ ಸರಕಾರದಿಂದ ಖಡಕ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಮುಂದಿನ ದಿನಗಳಲ್ಲಿ ಹಬ್ಬ ಹರಿದಿನಗಳು ಸಾಲಾಗಿ ಬರುತ್ತಿವೆ. ಈ ಹಿನ್ನೆಲೆ ಡಿಜೆ ಬಳಕೆಗೆ ನಿಷೇಧ ಹೇರಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ರಾಜ್ಯದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಸೆ. 07ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ. ಅದೇ ರೀತಿ ಸೆಪ್ಟೆಂಬರ್ 16ರಂದು ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಈ ಸಂಬಂಧ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭಗಳಲ್ಲಿ ಡಿಜೆ ಸಿಸ್ಟಂ ಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಅಲ್ಲದೇ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ & ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ ನಿಷೇಧಿಸುವಂತೆ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಲು ರಾಜ್ಯ ಸರ್ಕಾರ ಸೂಚಿಸಿದೆ.

error: Content is protected !!

Join the Group

Join WhatsApp Group