ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03.  ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತ ಚಾಲಕನನ್ನು ಮೂಲತಃ ಬಜಾಲ್ ವಿಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47) ಎಂದು ಗುರುತಿಸಲಾಗಿದೆ. ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಇಕ್ಬಾಲ್ ರವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಇತರ ರಿಕ್ಷಾ ಚಾಲಕರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Also Read  ವಿಟ್ಲ: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು

 

error: Content is protected !!
Scroll to Top