ಎನ್‌ಕೌಂಟರ್ ನಲ್ಲಿ 9 ನಕ್ಸಲರ ಗುಂಡೇಟಿನಿಂದ ಹತ್ಯೆ

(ನ್ಯೂಸ್ ಕಡಬ) newskadaba.com  ರಾಯ್ಪುರ, ಸೆ. 03.  ಛತ್ತೀಸ್‌ಗಢದ ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ ಕೌಂಟರ್‌ನಲ್ಲಿ ಕನಿಷ್ಠ ಒಂಬತ್ತು ನಕ್ಸಲೀಯರು ಹತರಾಗಿದ್ದಾರೆ ಎಂದು ವರದಿಯಾಗಿದೆ. ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿ ನಕ್ಸಲೀಯರು ಇರುವ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ, ಪೊಲೀಸ್ ತಂಡವು ಶೋಧ ಕಾರ್ಯಾಚರಣೆ ನಡೆಸಿತು.


ಬೆಳಿಗ್ಗೆ 10.30ರ ಸುಮಾರಿಗೆ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA) ಪೊಲೀಸ್ ಸಿಬ್ಬಂದಿ ಮುಖಾಮುಖಿಯಾದರು ಎನ್ನಲಾಗಿದೆ. ಆ ವೇಳೆ ನಡೆದ ಎನ್‌ಕೌಂಟರ್ ನಲ್ಲಿ 9 ಮಂದಿ ನಕ್ಸಲರು ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಸೆಲ್ಫ್ ಲೋಡಿಂಗ್ ರೈಫಲ್ 303, 12 ಬೋರ್ ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿದು ಬಂದಿದೆ.

Also Read  ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು ➤ ಚಾಲಕ ಅಪಾಯದಿಂದ ಪಾರು

 

error: Content is protected !!
Scroll to Top