ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 03. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ 35 ಮಂದಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಅವಘಡಗಳಿಂದಾಗಿ 19 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 16 ಮಂದಿ ಮೃತಪಟ್ಟಿದ್ದಾರೆ. ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳು ರಾಜ್ಯದಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೆಲಂಗಾಣದ 10 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ ಎನ್ನಲಾಗಿದೆ.

Also Read  ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಫೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಬಂಧನ

 

error: Content is protected !!
Scroll to Top