’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ    

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 03. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಈ ಸಭೆಗೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮತ್ತು ರಾಜ, ಸಂಸದ ಯದುವೀರ್​ ಒಡೆಯರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಭೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ. ಪ್ರಾಧಿಕಾರದಿಂದ ನಮ್ಮ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಬರುತ್ತೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು ಸರ್ಕಾರ ಪ್ರಾಧಿಕಾರ ರಚನೆ ಮಾಡುತ್ತಿದೆ. ಹುಂಡಿ ಹಣ ಆಯಾ ದೇವಸ್ಥಾನದ ಅಭಿವೃದ್ಧಿಗೆ ಬಳಕೆ ಆಗಬೇಕು. ಹಿಂದೂ ದೇವಾಲಯಗಳ ಮೇಲೆ ಏಕೆ ರೀತಿ ಮಾಡಲಾಗುತ್ತಿದೆ. ಪ್ರಾಧಿಕಾರ ರಚನೆಯಾದರೆ ನಮ್ಮ ಆಚರಣೆಗೂ ಬ್ರೇಕ್ ಬೀಳುತ್ತೆ. ಈ ಸಂಬಂಧ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಯುದುವೀರ್‌ ಸರ್ಕಾರ ನಡೆ ವಿರುದ್ದ ಕಿಡಿಕಾರಿದ್ದಾರೆ. ಪ್ರಾಧಿಕಾರ ರಚನೆ ಸಂಬಂಧ ಸೆಪ್ಟೆಂಬರ್​​ 5ರವರೆಗೆ ತಡೆಯಾಜ್ಞೆ ಇರುವುದು ಸತ್ಯ ಎಂದು ವರದಿ ತಿಳಿದು ಬಂದಿದೆ.

Also Read  8000 ಮಹಿಳಾ ಪೌರ ಕಾರ್ಮಿಕರಿಗೆ ಕೆಲಸ ಕಾಯಂ

 

error: Content is protected !!
Scroll to Top