(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾದ MRF ಘಟಕಕ್ಕೆ ಕೆನರಾ ಬ್ಯಾಂಕ್ CSR ನಿಧಿಯಡಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಾಣವಾದ 7 ಟನ್ ಒಣ ತ್ಯಾಜ್ಯ ವಿಂಗಡಿಸುವ ಸಾಮಾರ್ಥ್ಯದ ಟ್ರಕ್ ವಾಹನವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಆನಂದ ಕೆ ಇವರಿಗೆ ಕೆನರಾ ಬ್ಯಾಂಕ್ ಶಾಖೆಯ ಜನರಲ್ ಮಾನೇಜರ್ ಸುಧಾಕರ್ ಕೊಟ್ಟಾರಿ ಹಸ್ತಾಂತರಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕರು ಉಪಸ್ಥಿತರಿದ್ದರು.
Also Read ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಕೊರತೆ: ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯ