ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗಂಗೊಳ್ಳಿ, ಸೆ. 04.  ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಭಟ್ಕಳದ ಪೌಜಾನ್ ಅಹಮ್ಮದ್(19)ಎಂದು ಗುರುತಿಸಲಾಗಿದೆ.

ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ನಡೆದಿದ್ದು, ಸಿ.ಸಿ ಕ್ಯಾಮರಾದ ಪೂಟೇಜ್ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಪ್ರಕರಣದ ಆರೋಪಿ ಪೌಜಾನ್ ಅಹಮ್ಮದ್ ಹಾಗೂ ಇನ್ನೊರ್ವ ಕಾನೂನು ಸಂಘರ್ಷಕ್ಕೋಳಗಾದ ಬಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ. ಆರೋಪಿಯು ಕೃತ್ಯಕ್ಕೆ ಬಳಸಿದ ಟಿ.ವಿ.ಎಸ್ ಮೋಟಾರ್ ಸೈಕಲ್‌ನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

 

error: Content is protected !!
Scroll to Top