ಕಸ ಗುಡಿಸುವ ಹುದ್ದೆಗಳಿಗೆ 46,000 ಮಂದಿ ಸ್ನಾತಕೋತ್ತರ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com  ಚಂಡೀಗಢ, ಸೆ. 04.  ಹರ್ಯಾಣದ ಸರಕಾರಿ ಇಲಾಖೆಗಳು, ಮಂಡಳಿಗಳು, ನಿಗಮಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿನ ಕಸ ಗುಡಿಸುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸುಮಾರು 46,000 ಮಂದಿ ಸ್ನಾತಕೋತ್ತರ ಹಾಗೂ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.


ಹರ್ಯಾಣ ಸರಕಾರ ಹೊರಡಿಸಿರುವ ಉದ್ಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಮಾಸಿಕ ರೂ. 15,000 ವೇತನ ನಿಗದಿಪಡಿಸಲಾಗಿದ್ದು, ಹುದ್ದೆಗಳ ನಿರ್ದಿಷ್ಟ ಸಂಖ್ಯೆಯನ್ನು ಪ್ರಕಟಿಸಲಾಗಿಲ್ಲ. ಈ ಹುದ್ದೆಗಳಿಗೆ ಸುಮಾರು 6,000 ಸ್ನಾತಕೋತ್ತರ ಹಾಗೂ ಸುಮಾರು 40,000 ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರೊಂದಿಗೆ 12ನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಸುಮಾರು 1.2 ಲಕ್ಷ ಅಭ್ಯರ್ಥಿಗಳೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ.

Also Read  ಗಾಂಜಾ ಮತ್ತಿನಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಯುವಕರ ತಂಡ ➤ ಮಾಡಿದ್ದೇನು ಗೊತ್ತೇ..?!!

 

 

error: Content is protected !!
Scroll to Top