ಬಸ್ ನಲ್ಲಿ ಅಸ್ವಸ್ಥಗೊಂಡ ಮಹಿಳೆ  ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಸಿಬ್ಬಂದಿ  

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 04.  ಬಸ್ಸಿನಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡ ಮಹಿಳೆಯನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ಸಿನಲ್ಲಿಯೇ ಕರೆತಂದು ಮಗದೊಮ್ಮೆ ಬಸ್ ಸಿಬ್ಬಂದಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.

ವಿಟ್ಲ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಡಿಪು ಟಿಕೆಟ್ ಪಡೆದುಕೊಂಡಿದ್ದ ಮಹಿಳೆ ಮುಡಿಪು ತಲುಪಿದರೂ ಇಳಿಯುವುದು ಕಾಣಲಿಲ್ಲ. ಇದರಿಂದ ನಿರ್ವಾಹಕ ಯಾಕೂಬ್ ಎಂಬವರು ಮಹಿಳೆ ಸಮೀಪ ತೆರಳಿದಾಗ ಸಹಪ್ರಯಾಣಿಕರೊಬ್ಬರು, ಆಕೆ ಅಸ್ವಸ್ಥಳಾಗಿ ಕುಸಿದುಬಿದ್ದರೆಂದು ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಚಾಲಕ ಸವಾದ್, ನಿರ್ವಾಹಕ ಯಾಕೂಬ್ 10 ಕಿ.ಮೀ ದೂರಕ್ಕೆ ಬಸ್ಸನ್ನು ತಂದು ನಾಟೆಕಲ್ ಕಣಚೂರು ಆಸ್ಪತ್ರೆಯೊಳಕ್ಕೆ ಕೊಂಡೊಯ್ದು ತುರ್ತು ನಿಗಾ ಘಟಕದಲ್ಲಿ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

Also Read  ಬಳ್ಪ : ಮೂರು ಪ್ರಗತಿ ಬಂಧು ಸಂಘಗಳ ಉದ್ಘಾಟನೆ

 

 

error: Content is protected !!
Scroll to Top