(ನ್ಯೂಸ್ ಕಡಬ) newsksdaba.com ತಮಿಳುನಾಡು, ಸೆ. 04. ಇತ್ತೀಚೆಗೆ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳರ ಕ್ಷಮೆ ಯಾಚಿಸಿದ್ದಾರೆ.
ಈ ಪ್ರಕರಣವನ್ನು ರದ್ದುಗೊಳಿಸುವಂತೆ ಶೋಭಾ ಕರಂದ್ಲಾಜೆ ಪರವಾಗಿ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣ ನಿನ್ನೆ ಮತ್ತೆ ವಿಚಾರಣೆಗೆ ಬಂದಿತ್ತು.ಕೋರ್ಟಿನಲ್ಲಿ ಶೋಭಾ ಪರ ವಾದ ಮಂಡಿಸಿದ ವಕೀಲರು, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದರು.
ಕರ್ನಾಟಕದ ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟಕ್ಕೂ, ತಮಿಳುನಾಡಿನ ವ್ಯಕ್ತಿಗೂ ಸಂಬಂಧವಿದೆ ಎಂದು ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದರು. ನಂತರ ಈ ಸಂಬಂಧ ಡಿಎಂಕೆಯಿಂದ ತ್ಯಾಗರಾಜನ್ ನೀಡಿದ ದೂರಿನ ಆಧಾರದ ಮೇಲೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ಕೋಮುಗಲಭೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವುದು ಸೇರಿದಂತೆ 4 ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.