ಟಿ20 ಕ್ರಿಕೆಟ್ ​ನಲ್ಲಿ ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಹೊಸ ದಾಖಲೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04. ಸೌತ್ ಆಫ್ರಿಕಾದ ಕ್ರಿಕೆಟಿಗ ಇಮ್ರಾನ್ ತಾಹಿರ್ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. 45ನೇ ವಯಸ್ಸಿನಲ್ಲಿ ನಾಯಕನಾಗಿ ಕಣಕ್ಕಿಳಿಯುವ ಮೂಲಕ ಇತಿಹಾಸ ಬರೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಕಣಕ್ಕಿಳಿದ ಅತ್ಯಂತ ಹಿರಿಯ ಆಟಗಾರ ಎಂಬ  ಹೊಸ ದಾಖಲೆ ಇದೀಗ ಇಮ್ರಾನ್ ತಾಹಿರ್ ಪಾಲಾಗಿದೆ.

ಪ್ರಸ್ತುತ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ ನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕರಾಗಿ ಇಮ್ರಾನ್ ತಾಹಿರ್ ಕಣಕ್ಕಿಳಿಯುತ್ತಿದ್ದಾರೆ. ಗಯಾನಾ ಅಮೆಝಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸುವ ಮೂಲಕ ಟಿ20 ಕ್ರಿಕೆಟ್​ ನಲ್ಲಿ ನಾಯಕನಾಗಿ ಕಾಣಿಸಿಕೊಂಡು ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡು ದಾಖಲೆ ಬರೆದಿದ್ದಾರೆ ಎನ್ನಲಾಗಿದೆ.

Also Read  ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

 

error: Content is protected !!
Scroll to Top