ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರತೀ ವರ್ಷ ಪರಿಶಿಷ್ಟ ವರ್ಗದ (ST) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ.

ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ರಂದು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಯೋಜನಾ ಸಮನ್ವಯಾಧಿಕಾರಿ ಕಚೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಅಬ್ಬಕ್ಕ ನಗರ, ಕೊಟ್ಟಾರ, ಮಂಗಳೂರು-575006 ದೂ. ಸಂಖ್ಯೆ: 0824-2451269, 2451114 ಸಂಪರ್ಕಿಸುವಂತೆ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top