ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಲ್ಲಿ ಪಡೆದು ಸೆಪ್ಟೆಂಬರ್ 20 ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ದೂರವಾಣಿ ಸಂಖ್ಯೆ-0824-2451264 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸಬಾರದು ಮತ್ತು ಬಳಸಿದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು ಎಂದು ಪುತ್ತೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group