ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..!   23 ಲಕ್ಷ ಮೌಲ್ಯದ ವಸ್ತುಗಳು ವಶ

(ನ್ಯೂಸ್ ಕಡಬ) newskadaba.com  ಮಂಡ್ಯ, ಸೆ. 5. ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಪ್ರಮುಖ ಆರೋಪಿಯಾಗಿದ್ದಾನೆ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ. ಈಗಾಗಲೇ ಭ್ರೂಣ ಹತ್ಯೆ ಕೇಸ್ ​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

 

error: Content is protected !!
Scroll to Top