ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಡಿದ ಮಾನನಷ್ಟ ಮೊಕದ್ದಮೆ ಎಷ್ಟು ಗೊತ್ತೇ..? ► ಮೊತ್ತವನ್ನು ಕೇಳಿದರೆ ವಿಚಿತ್ರ ಅನ್ನಿಸುತ್ತದೆ

(ನ್ಯೂಸ್ ಕಡಬ) newskadaba.com ಮೈಸೂರು, ಫೆ.27. ತನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ನಟ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ವಕೀಲ ಮಹದೇವಸ್ವಾಮಿಯವರ ಮೂಲಕ 4 ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಕೇವಲ ಒಂದು ರೂಪಾಯಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಅಕ್ಟೋಬರ್ 2 ರಂದು ಸಂಸದ ಪ್ರತಾಪ್ ಸಿಂಹ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ, ವಿಚಾರವಾಗಿ ಶೋಕಾಷ್ ನೋಟಿಸ್ ನೀಡಲಾಗಿತ್ತು. 10 ದಿನಗಳಲ್ಲಿ ಈ ಬಗ್ಗೆ ಉತ್ತರ ನೀಡುವಂತೆ ಹೇಳಲಾಗಿದ್ದರೂ ಸಂಸದರು ಸ್ಪಂದಿಸದ ಹಿನ್ನಲೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ ಎನ್ನಲಾಗಿದೆ. ಇಷ್ಟು ಕಡಿಮೆ ಮೊತ್ತವನ್ನು ಪರಿಹಾರ ಕೋರಿ ದಾವೆ ಹೂಡಿರುವುದು ವಿಚಿತ್ರ ಎಂದನಿಸುತ್ತಿದೆ.

Also Read  ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಗಳಿಬ್ಬರ ಬಂಧನ

error: Content is protected !!
Scroll to Top