ರಸ್ತೆ ಅಪಘಾತ- ಯುವಕ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ.

ಗಣೇಶ ಅವರು ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7 ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಿಸಿದಾಗ ಹಿಂದಿನಿಂದ ಬಂದ ವಾಹನ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಿದ್ದು, ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

Also Read  ಹಲವು ಸೀರಿಯಲ್‌ ನಲ್ಲಿ ನಟಿಸಿದ್ದ ನಟ ಆತ್ಮಹತ್ಯೆ

 

error: Content is protected !!
Scroll to Top