(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಇನ್ನುಮುಂದೆ ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತಾ ದೃಷ್ಟಿಯಿಂದ ಸೇಫ್ಟಿ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಈಗಾಗಲೇ ಕೇಂದ್ರ ಸರಕಾರ ಈ ನಿಯಮ ಕಡ್ಡಾಯಗೊಳಿಸಿದ್ದರೂ ಕರ್ನಾಟಕದಲ್ಲಿ ಇದು ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ. ಈ ಕುರಿತು ಜಾಗೃತಿ ಅಭಿಯಾನ ಆರಂಭವಾಗಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿದೆ. ರಾಜ್ಯಾದ್ಯಂತ ಸಾರಿಗೆ ಇಲಾಖೆ ಅಧಿಕಾರಿಗಳು ಸೇಫ್ಟಿ ಹಾರ್ನೆಸ್ ಬೆಲ್ಟ್ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಇದು ಪೂರ್ಣಗೊಂಡ ಬಳಿಕ ನಿಯಮ ಉಲ್ಲಂಘಿಸುವ ಸವಾರರಿಗೆ ದಂಡ ವಿಧಿಸಲು ಚಿಂತನೆ ನಡೆಸಿರುವುದಾಗಿ ತಿಳಿದುಬಂದಿದೆ.