ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. 2024ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿತೆಯಾಗಿ ಆಚರಿಸುವ ಕುರಿತು ಮಂಡಳಿ ಹಲವು ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಗಣೇಶ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವುದು ಮಂಡಳಿಯ ಆದ್ಯ ಕರ್ತವ್ಯವಾಗಿದೆ.
ಈ ನಿಟ್ಟಿನಲ್ಲಿ ಜಲಮಾಲಿನ್ಯ, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣಕ್ಕಾಗಿ ಜೇಡಿಮಣ್ಣು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಲು ಶಾಲೆಗಳಲ್ಲಿ ಹೆಚ್ಚು ಪ್ರೋತ್ಸಾಹ ನೀಡಬೇಕು. ಶಾಲಾ ಮಕ್ಕಳಲ್ಲಿ ಮುಂಜಾನೆ ಪ್ರಾರ್ಥನೆಯಲ್ಲಿ ಘೋಷಣೆ ಮಾಡುವ ಮೂಲಕ ಪರಿಸರಸ್ನೇಹಿ ಗಣೇಶ ಹಬ್ಬವನ್ನು ಆಚರಿಸಲು ಜಾಗೃತಿ ಮೂಡಿಸಬೇಕು. ಮಣ್ಣಿನ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸುವಂತೆ ಹಾಗೂ ಬಣ್ಣ ಲೇಪನ ಮೂರ್ತಿಗಳನ್ನು ತಯಾರಿಸಿದಂತೆ ಹಾಗೂ ಮಾರಾಟ ಮಾಡದಂತೆ ಸೂಚಿಸಲಾಗಿದೆ.

Also Read  ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನದ ಜಾಗವನ್ನು ಲೀಸ್ ಗೆ ಕೊಡದಂತೆ ಮನವಿ

ಹಸಿರು ಪಟಾಕಿಗಳನ್ನು ಬಳಸಬೇಕು. ಬೀಜ ಗಣೇಶ ಪೂಜಿಸುವ ಮೂಲಕ ಔಷಧಿಯ ಗಿಡಗಳನ್ನು ಬೆಳೆಸಬೇಕು. ಡಿಜೆ ಸೆಟ್ ಹಾಗೂ ಹೆಚ್ಚು ಶಬ್ದ ಉಂಟುಮಾಡುವ ಧ್ವನಿವರ್ಧಕಗಳನ್ನು ಬಳಸದಂತೆ ಕ್ರಮ ವಹಿಸಬೇಕು ಹಾಗೂ ರಾತ್ರಿ 10 ರಿಂದ ಮುಂಜಾನೆ 6 ಗಂಟೆಯವರೆಗೆ ಕಡ್ಡಾಯವಾಗಿ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top