ಐಟಿಐ ಖಾಲಿ ಸೀಟುಗಳಿಗೆ ಪ್ರವೇಶ – ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಯಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಆಗಸ್ಟ್ 2024ನೇ ಸಾಲಿನ ಪ್ರವೇಶ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿ ನೀಡಲಾಗುತ್ತದೆ. 10ನೇ ತರಗತಿ ಉತ್ತೀರ್ಣ, ಅನ್ನುತ್ತೀರ್ಣ ಅಭ್ಯರ್ಥಿಗಳು ಸೆಪ್ಟೆಂಬರ್ 30ರ ಒಳಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಪ್ರವೇಶ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಐಟಿಐ ಕದ್ರಿ ಹೀಲ್ಸ್ ಮಂಗಳೂರು ಅಥವಾ ದೂರವಾಣಿ ಸಂಖ್ಯೆ 0824- 2211285 ಸಂಪರ್ಕಿಸುವಂತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top