ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್     

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ವೇಳೆ ತೊಕ್ಕೊಟ್ಟು ಸಮೀಪ ಈ ಘಟನೆ ನಡೆದಿದ್ದು, ತಲಪಾಡಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ಸನ್ನು ಬೆನ್ನಟ್ಟಿದ ಇನ್ನೊಂದು ಬಸ್ಸು ಚಾಲಕ ಓವರ್ ಬ್ರಿಡ್ಜ್ ಬಸ್ಸು ನಿಲ್ದಾಣದಲ್ಲಿ ಅಡ್ಡಲಾಗಿ ಇಟ್ಟಿದ್ದ. ಈ ವೇಳೆ ಎರಡು ಬಸ್ಸು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದು ಹೊಯ್ ಕೈಯಾಗಿ ಬೀದಿ ಕಾಳಗ ಆಗಿದೆ ಎಂದು ತಿಳಿದುಬಂದಿದೆ. ನಿರ್ವಾಹಕರು ಬೀದಿಯಲ್ಲಿ ಕಾದಾಡುತ್ತಿರುವ ದೃಶ್ಯವನ್ನು ಕಾರು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.

Also Read  ಕಡಬ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆಯವರಿಗೆ ಸುಳ್ಯಕ್ಕೆ ವರ್ಗಾವಣೆ ➤ ನೂತನ ಕಂದಾಯ ನಿರೀಕ್ಷಕರಾಗಿ ಅವಿನ್ ರಂಗತಮಲೆ

 

error: Content is protected !!
Scroll to Top