ಹಳಿದಾಟುತ್ತಿದ್ದ ವೇಳೆ ರೈಲು ಢಿಕ್ಕಿ- ಪೊಲೀಸ್ ಮೃತ್ಯು…!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 06. ಇಯರ್‌ಫೋನ್‌ ಹಾಕಿಕೊಂಡು ಹಳಿದಾಟುತ್ತಿದ್ದ ಪೊಲೀಸ್ ಸಿಬ್ಬಂದಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರನ್ನು ಶಾಮ್ಲಿ ಜಿಲ್ಲೆಯ ನಿವಾಸಿ ಅಕ್ಷಯ್‌ವೀರ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಇವರು ಶಹಜಹಾನ್‌ ಪುರದ ಇಂದಿರಾನಗರ ರೈಲ್ವೇ ಕ್ರಾಸಿಂಗ್‌ನಲ್ಲಿ ಇಬ್ಬರು ಪುರುಷರೊಂದಿಗೆ ರೈಲ್ವೆ ಹಳಿ ದಾಟುತ್ತಿದ್ದ ಸಂದರ್ಭ ಇಯರ್‌ಫೋನ್‌ ಹಾಕಿಕೊಂಡಿದ್ದರಿಂದ ರೈಲು ಬರುವುದು ತಿಳಿಯದೇ ರೈಲು ಢಿಕ್ಕಿಹೊಡೆದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Scroll to Top