ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. ನಾಳೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಗಣೇಶ ಹಬ್ಬಕ್ಕೆ ಬೆಸ್ಕಾಂ ಮಾರ್ಗಸೂಚಿ: ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರವಹಿಸುವಂತೆ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ಕೆಲ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಿ. ಜಾಗರೂಕರಾಗಿರಿ, ಯಾವುದೇ ವಿದ್ಯುತ್ ಅವಘಡಗಳಿಗೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ಒಟ್ಟಾಗಿ, ನಾವು ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ವರದಿ ತಿಳಿಸಿದೆ.

Also Read  ಬಸ್ ಸೌಲಭ್ಯಕ್ಕೆ ಒತ್ತಾಯಿಸಿ-ಹುಬ್ಬಳ್ಳಿ-ವಿಜಯಪುರ ಗ್ರಾಮಸ್ಥರಿಂದ ಪ್ರತಿಭಟನೆ ➤ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು 

 

 

error: Content is protected !!
Scroll to Top