ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ‘ಕಮಲ’ ಪಕ್ಷದ ಚಿಹ್ನೆಯಾಗಿ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಪಿಬಿ ವರಾಳೆ ಅವರ ಪೀಠವು ಈ ಅರ್ಜಿಯನ್ನು ಪ್ರಚಾರ ಪಡೆಯುವ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿದೆ.


ʼಕಮಲʼ ಹೂವು ಭಾರತದ “ರಾಷ್ಟ್ರೀಯ ಹೂವು” ಆಗಿರುವುದರಿಂದ ಅದನ್ನು ಯಾವುದೇ ರಾಜಕೀಯ ಪಕ್ಷಕ್ಕೆ ನೀಡಲಾಗುವುದಿಲ್ಲ ಮತ್ತು ಅಂತಹ ಹಂಚಿಕೆ ರಾಷ್ಟ್ರೀಯ ಸಮಗ್ರತೆಗೆ ಅವಮಾನ ಎಂದು ಕೋರ್ಟ್ ನಲ್ಲಿ ವಾದಿಸಲಾಗಿತ್ತು. ತಾಂತ್ರಿಕ ಕಾರಣಗಳಿಗಾಗಿ ಅ.2023ರಲ್ಲಿ ಸಿವಿಲ್ ನ್ಯಾಯಾಲಯ ಮೊಕದ್ದಮೆಯನ್ನು ರದ್ದುಗೊಳಿಸಿತ್ತು. ಇದರ ಬಳಿಕ ವಿಪತ್ ಮಧ್ಯಪ್ರದೇಶ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅವರ ಅರ್ಜಿಯನ್ನು ಹೈಕೋರ್ಟ್ ಕೂಡ ತಿರಸ್ಕರಿಸಿತ್ತು. ಆ ಬಳಿಕ ಅವರು ಮತ್ತೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿಯನ್ನು ಸಲ್ಲಿಸಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆ : ಎಲ್ಲಾ ಇಲಾಖೆಗಳು ಪ್ರಾಮಾಣಿಕ ಪ್ರಯತ್ನ ಮಾಡಲಿ ➤ ಎಸ್ ಸಸಿಕಾಂತ್ ಸೆಂಥಿಲ್

 

error: Content is protected !!
Scroll to Top