ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ

(ನ್ಯೂಸ್ ಕಡಬ) newskadaba.com  ಹಾಸನ, ಸೆ. 6. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟ ತಾಯಿ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು ಎಂದು ವರದಿ ತಿಳಿಸಿದೆ.

Also Read  ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ      

 

error: Content is protected !!
Scroll to Top