ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ನಡೆದಿದೆ.

 

ಮೃತರನ್ನು ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಎಂದು ಗುರುತಿಸಲಾಗಿದೆ. ಮೃತ ಚಂದ್ರಹಾಸ ಶೆಟ್ಟಿಯವರು ಹರೇಕಲ್ ದೆಬ್ಬೇಲಿಯಲ್ಲಿರುವ ತಮ್ಮ ಪತ್ನಿಯ ಮನೆಯಿಂದ ಕಲ್ಲೇಕರುಗುತ್ತು ಕಡೆಗೆ ಹೋಗುತ್ತಿದ್ದಾಗ ಅವರ ಸ್ಕೂಟರ್ಗೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top