ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಗಣೇಶ ಚತುರ್ಥಿ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭ ಬಾರ್ ಮತ್ತು ವೈನ್‌ ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನೀಯರು ಮದ್ಯ ಸೇವಿಸಿ ಗಲಭೆಮಾಡುವ ಸಾಧ್ಯತೆ ಇದ್ದು, ಹೀಗಾಗಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21ರ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೆಪ್ಟೆಂಬರ್ 7 ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9 ಮತ್ತು 11 ರಂದು ಬೆಳಿಗ್ಗೆ 6 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Also Read  ಉಪ್ಪಿನಂಗಡಿ: ಗುಡ್ಡ ಕುಸಿತ...!       ಸಂಚಾರ ಸಂಪೂರ್ಣ ಬಂದ್  

error: Content is protected !!
Scroll to Top