ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ – News Kadaba

ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 07. ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ.


ಮೃತಪಟ್ಟವರನ್ನು ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಎಂದು ಗುರುತಿಸಲಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಿಸಿರೋಡಿನಿಂದ ಮಂಗಳೂರು ಕಡೆಗೆ ನವದಂಪತಿ ಪ್ರಯಾಣಿಸುತ್ತಿದ್ದ ಆಲ್ಟೋ ಕಾರೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲಿಂದ ರಸ್ತೆಯ ಇನ್ನೊಂದು ಬದಿಗೆ ಹಾರಿ ಕೆ.ಎಸ್‌.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸಹಪ್ರಯಾಣಿಕೆ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ದಂಪತಿಗಳಿಬ್ಬರೂ ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top