ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ.

Also Read  ಮಾ.8ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿ       ➤  ಆರೋಗ್ಯ ಇಲಾಖೆ NHM ನೌಕರರ ಖಾಯಂಗೆ ಸಿಎಂ ಬೊಮ್ಮಾಯಿ ನಿರ್ಧಾರ ?

 

error: Content is protected !!
Scroll to Top