ಇಂದು ಹೈಕೋರ್ಟ್ ನಲ್ಲಿ ಮುಡಾ ಹಗರಣದ ಕೇಸ್ ವಿಚಾರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕೋರ್ಟ್ ನಲ್ಲಿ ಇಂದು ಮುಡಾ ಹಗರಣದ ಕೇಸ್ ವಿಚಾರಣೆ ನಡೆಯಲಿದ್ದು, ಹಿನ್ನೆಲೆ ಈ ದಿನ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ.

ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಅಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

Also Read  ಹೊಸ್ಮಠ ಸೇತುವೆ ಬಳಿ ವಾಹನ ತೊಳೆದು ನೀರು ಕಲುಷಿತಗೊಳಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

error: Content is protected !!
Scroll to Top