ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 09.  ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ.

ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಇವರಿಬ್ಬರು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ. ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಕಾಂಗ್ರೆಸ್‌ಗೆ ಸೇರ್ಪಡೆಯಾದ ಬೆನ್ನಲ್ಲೇ ವಿನೇಶ್ ಫೋಗಟ್ ಅವರಿಗೆ ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿತ್ತು ಎಂದು ವರದಿ ತಿಳಿಸಿದೆ.

Also Read  ದತ್ತಜಯಂತಿ ಆಚರಣೆಯ‌‌ ನಂತರ ಪೆಟ್ರೋಲ್ ಬಾಂಬ್ ಪ್ರಯೋಗ ► 5 ಪೆಟ್ರೋಲ್ ಬಾಂಬ್ ಸಹಿತ 13 ಮಂದಿ ವಶಕ್ಕೆ: ಎಸ್ಪಿ ಅಣ್ಣಾಮಲೈ

 

error: Content is protected !!
Scroll to Top