ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗುವುದರಲ್ಲಿತ್ತು. ಈ ಹಿನ್ನೆಲೆ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರ ವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಇನ್ನು ಸೆಪ್ಟೆಂಬರ್ 12ರಂದು ದರ್ಶನ್ ಸೇರಿ ಎಲ್ಲಾ ಆರೋಪಿಗಳು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ ಎಂದು ವರದಿಯಾಗಿದೆ.

Also Read  ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

 

 

error: Content is protected !!
Scroll to Top