ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗುಜರಾತ್, ಸೆ. 09.  ಗುಜರಾತಿನ ಸೂರತ್‌ ನಲ್ಲಿ ಗಣೇಶ್ ಪೆಂಡಾಲ್ ಮೇಲೆ ನಿನ್ನೆ ಸಾಯಂಕಾಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ.

ಕಲ್ಲು ತೂರಾಟದಲ್ಲಿ ತೊಡಗಿದ್ದ ಎಲ್ಲಾ 6 ಜನರನ್ನು ಮತ್ತು ಘಟನೆಗೆ ಪ್ರೇರಣೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಕಲ್ಲು ತೂರಾಟದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸುಮಾರು ಸಾವಿರ ಪೊಲೀಸ್ ಸಿಬ್ಬಂದಿಯನ್ನು ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ

 

error: Content is protected !!
Scroll to Top