(ನ್ಯೂಸ್ ಕಡಬ) newskadaba.com ಗೊಂಡಾ, ಸೆ. 09. 17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ. ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಸ್ಟೇಷನ್ ಹೌಸ್ ಆಫೀಸರ್ ಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.